ಹುಬ್ಬಳ್ಳಿ: ನವ ವಿವಾಹಿತೆಯೊಬ್ಬಳ ಅಪಹರಣಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರ್ ಚೇತನ್ ಹಿರೇಕೇರೂರ ಹಾಗೂ ಆತನ ಸಹಚರ ಸುನೀಲ್ ಎಂಬಾತನನ್ನು ಹದಿನೈದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೌದು. ಸಹನಾ ಎಂಬ ಯುವತಿಯನ್ನು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹನಾಳ ಪತಿ ನಿಖಿಲ್ ದಾಂಡೇಲಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಕೋರ್ಟ್ ಬಂಧನಕ್ಕೆ ವಾರೆಂಟ್ ಜಾರಿ ಮಾಡಿದ್ದರೂ ಕೂಡ ಮೂರು ದಿನಗಳ ಕಾಲ ತಲೆ ಮರೆಸಿಕೊಂಡಿದ್ದ ಚೇತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಹದಿನೈದು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/07/2022 10:00 pm