ಹುಬ್ಬಳ್ಳಿ: ಇತ್ತೀಚೆಗಷ್ಟೇ ಲವ್ ಮ್ಯಾರೇಜ್ ಆಗಿದ್ದ ಗ್ರಾಮ ಪಂಚಾಯತಿ ಸದಸ್ಯನನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆಯೊಂದು ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ.
ಹೌದು..ದೀಪಕ್ ಶಿವಾಜಿ ಪಟದಾರಿ ಎಂಬ ಗ್ರಾಮ ಪಂಚಾಯತಿ ಸದಸ್ಯನನ್ನು ಯಾರೋ ದುಷ್ಕರ್ಮಿಗಳು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ತನಿಖೆಯ ನಂತರವೇ ಖಚಿತ ಮಾಹಿತಿ ಲಭ್ಯವಾಗಬೇಕಿದೆ.
ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/07/2022 08:18 am