ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಭಕ್ತರ ಸೋಗಿನಲ್ಲಿ ಗುರೂಜಿ ಕಾಲಿಗೆ ಬಿದ್ದರು....ಇರಿದು ಇರಿದು ಕೊಂದರು

ಹುಬ್ಬಳ್ಳಿ: ಸರಳವಾಸ್ತು ಸಂಸ್ಥಾಪಕ ಹಾಗೂ ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಕಗ್ಗೊಲೆ ಮಾಡಲಾಗಿದ್ದು, ಹತ್ಯೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೌದು. ಹುಬ್ಬಳ್ಳಿ ಉಣಕಲ್‌ನಲ್ಲಿರುವ ಪ್ರೆಸಿಡೆಂಟ್ ಹೋಟೆಲ್‌ನ ರಿಸೆಪ್ಶನ್‌ನಲ್ಲಿ ದುಷ್ಕರ್ಮಿಗಳು ಹಾಡಹಗಲೇ ಕೃತ್ಯ ಎಸಗಿದ್ದಾರೆ. ಆರೋಪಿಗಳ ಚಲನವಲನ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ ಗುರೂಜಿ ಕಾಲನ್ನು ನಮಸ್ಕರಿಸಿ ಬಳಿಕ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಚಾಕುವಿನಿಂದ್ದಾರೆ. ಗುರೂಜಿಯವರು ರಕ್ತ ಮಡುವಿನಲ್ಲಿ ಬಿಳುತ್ತಿದ್ದಂತೆಯೇ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಕಾಲು ಕಿತ್ತಿದ್ದಾರೆ. ಇನ್ನೂ ಸಿನಿಮಾ ಸ್ಟೈಲ್ ನಲ್ಲಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೃತ್ಯ ಎಸಗಿದವರ ಬಂಧನಕ್ಕೆ ಬಲೆ ಬಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/07/2022 02:31 pm

Cinque Terre

271.16 K

Cinque Terre

18

ಸಂಬಂಧಿತ ಸುದ್ದಿ