ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಂಜುನಾಥ ಮರೆವಾಡ, ಮಹಾಂತೇಶ ಶಿರೋಳ ಬಂಧಿಸಲಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡಿದ್ದೇವು. ಈಗ ಬಂಧಿಸಿದ್ದು, ಕೊಲೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಗೊತ್ತಾಗಬೇಕಿದೆ ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆಭೂರಾಮ್ ಹೇಳಿದರು.
ವಿದ್ಯಾನಗರದ ಪೊಲೀಸ್ ಠಾಣೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡ ನೇಮಿಸಿದ್ದೇವು. ಆರೋಪಿಗಳ ಚಹರಾಪಟ್ಟಿಯನ್ನು ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ಹೇಳಿದ್ದೇವು. ಆ ಪ್ರಕಾರ ಆರೋಪಿಗಳನ್ನು ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಆರೋಪಗಳನ್ನು ಬಂಧಿಸಿದ್ದಾರೆ. ಇನ್ನೂ ವಿಚಾರಣೆ ಬಾಕಿ ಇದೆ ಎಂದು ಅವರು ಹೇಳಿದರು.
ಇನ್ನೂ ವನಜಾಕ್ಷಿಯ ವಿಚಾರಣೆ ಕುರಿತು ಮಾತನಾಡಿದ ಅವರು, ಮಹಾಂತೇಶ ಪತ್ನಿ ವನಜಾ ಅವರನ್ನು ವಿಚಾರಣೆ ಮಾಡಿ ಕಳಿಸಲಾಗಿದೆ.ವಿವಿಧ ಆಯಾಮಗಳಲ್ಲಿ ತನಿಖೆ ನಡೆಯಬೇಕಿದೆ. ವಿಚಾರಣೆಯ ನಿಟ್ಟಿನಲ್ಲಿ ಹಲವರನ್ನ ಕರೆಯಿಸಬೇಕಾಗುತ್ತದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/07/2022 06:56 pm