ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಫ್ಐಆರ್; ಹಣ ಕೊಡದಿದ್ದಕ್ಕೆ ಹೆಣವಾದ್ರಾ ಗುರೂಜಿ.?

ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಅವರ ಇಬ್ಬರು ಆಪ್ತರು ಹುಬ್ಬಳ್ಳಿಯ ಶ್ರೀನಗರ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್ ಹೋಟೆಲ್‌ನ ರಿಸೆಪ್ಶನ್ ಲಾಬಿಯಲ್ಲಿ ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಈ ಸಂಬಂಧ ತಡರಾತ್ರಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದ್ದು, ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟಿದ್ದಾರೆ.

ಹೌದು. ಘಟನೆಗೆ ಸಂಬಂಧಿಸಿದಂತೆ ಗುರೂಜಿ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಸರಳ ವಾಸ್ತು ಸಂಸ್ಥೆಯಲ್ಲಿ ಅವ್ಯವಹಾರ ನಡೆಸಿದ್ದ ಕಾರಣಕ್ಕೆ ಮಹಾಂತೇಶ ಅವರನ್ನು ಚಂದ್ರಶೇಖರ ಗುರೂಜಿ ಕೆಲಸದಿಂದ ತೆಗೆದಿದ್ದರು. ಆ ಸಿಟ್ಟಿನಿಂದ ಹುಬ್ಬಳ್ಳಿ ಗೋಕುಲ ರಸ್ತೆ, ಜೆಸಿ ನಗರದಲ್ಲಿ ಗುರೂಜಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಕಿಂಗ್‌ಗೆ ಜಾಗ ಕೊಟ್ಟಿಲ್ಲ ಹಾಗೂ ಸೋಲಾರ್ ವ್ಯವಸ್ಥೆ ಅಳವಡಿಸಿಲ್ಲ ಎಂದು ಮಹಾಂತೇಶ ಧಾರವಾಡ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ಹಿಂಪಡೆಯಲು ಗುರೂಜಿ ಅವರಲ್ಲಿ ಹಣ ಕೇಳುತ್ತಿದ್ದರು. ಆಗಾಗ ಜೀವ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದರು. ಹಣ ನೀಡದ ಹಿನ್ನೆಲೆಯಲ್ಲಿ ಹಾಗೂ ಕೆಲಸದಿಂದ ತೆಗೆದು ಹಾಕಿದ್ದರಿಂದ ಹತ್ಯೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ವನಜಾಕ್ಷಿ ಬಳಿ ತಮ್ಮ ಆಸ್ತಿ ಕೇಳಿದ್ದಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆಯಾಯಿತೇ? ಎಂಬ ಮಾಹಿತಿ ಸಹ ಲಭ್ಯವಾಗಿದ್ದು, ಪ್ರಕರಣ ತನಿಖೆಯ ಹಂತದಲ್ಲಿದ್ದು, ಯಾವ ತಿರುವು ಪಡೆದುಕೊಳ್ಳಲಿದೆ ಎಂಬುವುದನ್ನು ಕಾದುನೋಡಬೇಕಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/07/2022 09:03 am

Cinque Terre

127.49 K

Cinque Terre

10

ಸಂಬಂಧಿತ ಸುದ್ದಿ