ಹುಬ್ಬಳ್ಳಿ: ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಸುಳ್ಳ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗುರೂಜಿ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಸದ್ಯ ಗುರೂಜಿ ಸಂಬಂಧಿಕರು ಹಾಗೂ ಅರ್ಚಕರು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಕೊಟ್ರಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಅಂತ್ಯಕ್ರಿಯೆ ವಿಧಿ ವಿಧಾನ ನಡೆಯಲಿದ್ದು,11 ಜನ ಶಾಸ್ತ್ರಿಗಳ ತಂಡದಿಂದ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 1 ಕ್ಕೆ ಗುರೂಜಿಗಳ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪಬ್ಲಿಕ್ ನೆಕ್ಸ್ಟ್ ಮೂಲಕ ಅರ್ಚಕರು ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/07/2022 11:16 am