ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರ ವಲಯದ ಸುಳ್ಳ ರಸ್ತೆಯ ಶಿವ ಪ್ರಭು ಬಡಾವಣೆಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿರುವ ಬೆನ್ನಲ್ಲೇ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೌದು..ಅಂತ್ಯಕ್ರಿಯೆ ನೆರವೇರಿಸುವ ಸ್ಥಳ ಪರಿಶೀಲನೆ ನಡೆಸಿದ ಡಿಸಿಪಿ ಅವರು, ಓರ್ವ ಸಿಪಿಐ ಸ್ಥಳದಲ್ಲಿದ್ದು ಅಂತ್ಯಸಂಸ್ಕಾರಕ್ಕೆ ಅನುಕೂಲ ಆಗುವಂತೆ ಜನರಿಗೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದಾರೆ.
ಇನ್ನೂ ಗುರೂಜಿ ಸ್ವಂತ ಜಮೀನಿನಲ್ಲೇ ನೆರವೇರಲಿರುವ ಅಂತ್ಯಸಂಸ್ಕಾರದ ಸ್ಥಳದಲ್ಲಿ ಖಾಸಗಿ ಭದ್ರತಾ ಸಿಬ್ಬಂದಿ ಕೂಡಾ ನಿಯೋಜನೆ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/07/2022 12:24 pm