ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಭಕ್ತರ ಸೋಗಿನಲ್ಲಿ ದೇವಸ್ಥಾನಕ್ಕೆ ನುಗ್ಗಿದ ಖದೀಮರು ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕದ್ದು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ನೃಪತುಂಗ ನಗರದಲ್ಲಿಂದು ನಡೆದಿದೆ.
ಕರಿಯಮ್ಮ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಖದೀಮರು ಕಾಣಿಕೆ ಹುಂಡಿಯೊಂದಿಗೆ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅಶೋಕ್ ನಗರದ ಪೊಲೀಸ್ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಸಾರ್ವಜನಿಕರು ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಕಳ್ಳತನ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Kshetra Samachara
09/07/2022 12:06 pm