ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಮಹಾಂತೇಶ ಶಿರೂರ್ ಹಾಗೂ ಮಂಜುನಾಥ ಮೆರೆವಾಡನನ್ನು ಹುಬ್ಬಳ್ಳಿಯ ಕೋರ್ಟ್‌ಗೆ ಹಾಜರುಪಡಿಸಲಾಗಿದೆ.
ಹೌದು. ಈ ಹಿಂದೇ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ಇಂದು ಪೊಲೀಸ್ ಕಸ್ಟಡಿಯ ಅವಧಿ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನ ವಿದ್ಯಾನಗರದ ಪೊಲೀಸರಿಂದ ಬೀಗಿ ಬಂದೋಬಸ್ತ್ ಮೂಲಕ ಕೋರ್ಟ್‌ಗೆ ಹಾಜರು ಪಡಿಸಲಾಗಿದೆ.
ಈಗಾಗಲೇ ಆರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಈಗಲೂ ಕೂಡ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/07/2022 05:15 pm