ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೇ ಆರು ದಿನಗಳ ಜು.18ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಅಧಿಕ ದಿವಾನಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೊಲೆ ಪ್ರಮುಖ ಆರೋಪಿಗಳಾದ ಮಹಾಂತೇಶ ಶಿರೂರ್, ಮಂಜುನಾಥ ಮೆರೆವಾಡ ಎಂಬುವಂತ ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಾಗೇಶ ನಾಯಕ ಅವರು ಜು.18ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ 15 ದಿನಗಳ ಕಾಲ ವಿದ್ಯಾನಗರ ಪೊಲೀಸರು ಪೊಲೀಸ್ ಕಸ್ಟಡಿಗೆ ಕೇಳಿದ್ದು, ಒಂದನೇ ಅಧಿಕ ದಿವಾನಿ ನ್ಯಾಯಾಲಯ ಆರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/07/2022 05:39 pm