ಧಾರವಾಡ: ಧಾರವಾಡದ ಪ್ರತಿಷ್ಠಿತ ಹೋಟೆಲ್ ಮುಂಭಾಗದಲ್ಲಿ ನಿಂತಿದ್ದ ವಾಹನದಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಆರೋಪಿಗಳ ಸಮೇತ ಆ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರತಿಷ್ಠಿತ ಹೋಟೆಲ್ ಮುಂಭಾಗದಲ್ಲಿ ಆರು ಜನ ಆರೋಪಿತರು ಯಾವುದೋ ಒಂದು ಜಗಳಕ್ಕೆ ಸಂಬಂಧಿಸಿದಂತೆ ಮಾತನಾಡುತ್ತ ನಿಂತಿದ್ದನ್ನು ಗಮನಿಸಿದ ಬೇರೆ ಊರಿನ ಪೊಲೀಸ್ ಅಧಿಕಾರಿಯೊಬ್ಬರು ಕೂಡಲೇ ಧಾರವಾಡದ ಎಸಿಪಿ ಅವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ವಿದ್ಯಾಗಿರಿ ಠಾಣೆ ಪೊಲೀಸರು ಹಾಗೂ ಎಸಿಪಿ ವಿಜಯಕುಮಾರ ತಳವಾರ ಅವರು, ಆ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಅವರ ವಾಹನವನ್ನು ತಪಾಸಣೆ ನಡೆಸಿದಾಗ ಅದರಲ್ಲಿ ತಲ್ವಾರ್, ಹಾಕಿ ಸ್ಟಿಕ್ ಸೇರಿದಂತೆ ಇತರ ಮಾರಕಾಸ್ತ್ರಗಳು ಪತ್ತೆಯಾಗಿವೆ.
ಇವರನ್ನು ವಿಚಾರಣೆ ನಡೆಸಿದಾಗ ಇವರು ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದವರು ಎಂಬುದು ತಿಳಿದು ಬಂದಿದೆ. ಸದ್ಯ ಇವರನ್ನು ವಿದ್ಯಾಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Kshetra Samachara
09/08/2022 12:38 pm