ಹುಬ್ಬಳ್ಳಿ: ನಗರದ ಬ್ರಾಡ್ ವೇ ಸೇರಿದಂತೆ ಹಲವು ಕಡೆಗಳಲ್ಲಿ ಮಧ್ಯರಾತ್ರಿ ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದ ನಾಲ್ವರನ್ನು ಹುಬ್ಬಳ್ಳಿಯ ಶಹರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಕಳೆದ ಬುಧವಾರ ಮಧ್ಯರಾತ್ರಿ ಹುಬ್ಬಳ್ಳಿಯ ಬ್ರಾಡ್ ವೇ ಗಳಲ್ಲಿನ ಏಳಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಪರಾರಿಯಾಗಿದ್ದರು. ಆರೋಪಿಗಳ ಕೃತ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಶಹರ ಠಾಣೆಯ ಇನ್ಸ್‌ಪೆಕ್ಟರ್ ಆನಂದ ಅವರ ನೇತೃತ್ವದಲ್ಲಿ ಆರೋಪಿಗಳನ್ನು ತುಮಕೂರಿನ ಪಾವಗಡದಲ್ಲಿ ಬಂಧಿಸಿದ್ದಾರೆ.
ಬಂಧಿತರ ಪೈಕಿ ಓರ್ವ ಅಂತರರಾಜ್ಯ ಕಳ್ಳನಾಗಿದ್ದು ಇನ್ನುಳಿದ ಮೂವರು ತುಮಕೂರು ಹಾಗೂ ಹೊಸಪೇಟೆಯ ಮೂಲದವರೆಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಸದ್ಯ ಆರೋಪಿಗಳಿಂದ 22 ಸಾವಿರ ನಗದು ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ವಿನಯ ರೆಡ್ಡಿ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/08/2022 09:21 am