ಕಲಘಟಗಿ: ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಶಾಲೆಯಲ್ಲಿ ರಾಷ್ಟ್ರಧ್ವಜ ಉಲ್ಟಾ ಹಾರಿಸಿದ ಪ್ರಕರಣದ ಸಂಬಂಧ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಧ್ವಜಾರೋಹಣ ಮಾಡಿದವರ ವಿರುದ್ಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದೇ ಆಗಷ್ಟ್ 15ರಂದು ಮುಕ್ಕಲ್ ಗ್ರಾಮದ ಅಂಬೇಡ್ಕರ್ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ ಕುಂಬಾರ ಹಾಗೂ ಶಾಲಾ ಸಮಿತಿ ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ ಉಲ್ಟಾ ಧ್ವಜ ಹಾರಿಸಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಸ್ವಾತಂತ್ರ್ಯೋತ್ಸವದ ದಿನದಂದು ನಡೆದ ಘಟನೆ ಸಂಬಂಧ ಲಿಂಗರೆಡ್ಡಿ ನಡುವಿನಮನಿ, ಉಲ್ಟಾ ಧ್ವಜ ಕಟ್ಟಿದ್ದ ದೈಹಿಕ ಪ್ರಕಾಶ ಕುಂಬಾರ ವಿರುದ್ಧ, ರಾಷ್ಟ್ರಧ್ವಜ ಅಪಮಾನ ಕಲಂ 1971 ಅಡಿಯಲ್ಲಿ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಈ ಇಬ್ಬರು ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಕ್ಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Kshetra Samachara
21/08/2022 01:01 pm