ಹುಬ್ಬಳ್ಳಿ: ಚಿತ್ರದುರ್ಗದ ಮುರಘಾ ಶ್ರೀಗಳನ್ನು ವಶಕ್ಕೆ ಪಡೆದಿದ್ದು ನನ್ನ ಗಮನಕ್ಕೆ ಬಂದಿಲ್ಲ. ನಾನೂ ಅಲ್ಲಿನ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ಪಡೆಯುತ್ತೇನೆ. ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮುರುಘಾ ಶ್ರೀಗಳ ಬಂಧನದ ಕುರಿತು ಮಾತನಾಡಿದ ಅವರು, ನಮ್ಮ ಸಿಬ್ಬಂದಿ ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿದ್ದಾರೆ. ನಾನು ಎಡಿಜಿಪಿ ಆಗಿ ಇದೇ ತನಿಖೆ ರೀತಿ ಮಾಡಿ ಎಂದು ಹೇಳುವುದಿಲ್ಲ. ಎಲ್ಲವೂ ತನಿಖಾಧಿಕಾರಿಗೆ ವಿವೇಚನೆಗೆ ಬಿಟ್ಟಿದ್ದು. ಪೋಕ್ಸೋ ಕಾಯ್ದೆಯಡಿ ಏನೂ ವಿಚಾರಣೆ ಮಾಡಬೇಕು ಅದನ್ನು ಮಾಡ್ತಾರೆ ಇದ್ದಾರೆ ಎಂದರು.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 164 ಮಾಡಿದ್ದು, ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ವಿದ್ಯಾರ್ಥಿಗಳ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/08/2022 01:39 pm