ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ;800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ...!

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿದ್ದ ಸರಳ ವಾಸ್ತು ಕಂಪನಿಯ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಹೌದು.. ಗುರೂಜಿ ಹತ್ಯೆಗೆ ಸಂಬಂಧಿಸಿ ಪೊಲೀಸರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು. 5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲ್ ನಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು.

ಘಟನೆ ನಡೆದ 4 ತಾಸಿನೊಳಗೆ ಪೊಲೀಸರು ಹಂತಕರನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಬಂಧಿತರ ವಿರುದ್ಧ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಸಹಿತ ಕೊಲೆಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಕಲೆ ಹಾಕಲಾದ ಮಾಹಿತಿ ಹಾಗೂ ಸಂಗ್ರಹಿಸಿದ ಸಾಕ್ಷಿಗಳು ಸೇರಿ 800ಕ್ಕೂ ಹೆಚ್ಚು ಪುಟಗಳುಳ್ಳ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದುಬಂದಿದ್ದು, ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್‌ ಆಯುಕ್ತರು ಎಸಿಪಿ ವಿನೋದ ಮುಕ್ತೇದಾರ ನೇತೃತ್ವದಲ್ಲಿ ಐದು ತನಿಖಾ ತಂಡ ರಚಿಸಿದ್ದರು.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/10/2022 11:34 am

Cinque Terre

83.98 K

Cinque Terre

0

ಸಂಬಂಧಿತ ಸುದ್ದಿ