ಧಾರವಾಡ: ಹುಬ್ಬಳ್ಳಿ ನಗರದ ನಿವಾಸಿಯಾದ ಬಾಳಕೃಷ್ಣ ಇಜಂತಕರವರು ಹೊಸ ಯೋಜನೆಯಡಿ ಸೆಪ್ಟೆಂಬರ್ 15, 2019 ರಿಂದ ಅಕ್ಟೋಬರ್ 6, 2020 ರವರೆಗೆ ಒಟ್ಟು 19 ಕಂತುಗಳಲ್ಲಿ 1,56,000 ರೂಪಾಯಿ ಕಟ್ಟಿದ್ದರೂ ಸದರಿ ಹಣಕ್ಕೆ ಸಮಾನಾಂತರವಾಗಿ ಒಟ್ಟು 4.6 ಗ್ರಾಂ ಬಂಗಾರವನ್ನು ಯೋಜನಾ ಅವಧಿ ಮುಕ್ತಾಯವಾದರೂ ಯೋಜನೆಯ ನಿಯಮಾನುಸಾರ ತನಗೆ ಹುಬ್ಬಳ್ಳಿಯ ಲಕ್ಷ್ಮೀ ಗೋಲ್ಡ್ ಪ್ಯಾಲೇಸ್‌ನವರು ಬಂಗಾರ ಹಿಂದಿರುಗಿಸದೇ ಸತಾಯಿಸಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಈ ದೂರನ್ನು ಸಲ್ಲಿಸಿದ್ದರು.
ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ. ಭೂತೆ ಹಾಗೂ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಸದಸ್ಯರು ಯೋಜನೆಯ ಒಪ್ಪಂದದಂತೆ ದೂರುದಾರರಿಂದ ಹಣ ಪಡೆದು ಅದಕ್ಕೆ ಸಮಾನಾಂತರ ಮೌಲ್ಯದ ಬಂಗಾರ ಕೊಡದೇ ಲಕ್ಷ್ಮೀ ಗೋಲ್ಡ್ ಪ್ಯಾಲೇಸರವರು ದೂರುದಾರನಾದ ತನ್ನ ಗ್ರಾಹಕನಿಗೆ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ತೀರ್ಪು ನೀಡಿ ಅಗತ್ಯವಿರುವ ಹೆಚ್ಚಿನ ಹಣ ಪಡೆದು ಫಿರ್ಯಾದಿದಾರರಿಗೆ 4.6 ಗ್ರಾಂ ತೂಕದ 24 ಕ್ಯಾರೇಟನ ಚಿನ್ನ ನೀಡುವಂತೆ ಹಾಗೂ ಸೇವಾ ನ್ಯೂನ್ಯತೆ ಎಸಗಿದ್ದಕ್ಕಾಗಿ ಫಿರ್ಯಾದಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗೆ 25 ಸಾವಿರ ಪರಿಹಾರ ಹಾಗೂ 10 ಸಾವಿರ ಪ್ರಕರಣದ ಖರ್ಚು ವೆಚ್ಚ ನೀಡಬೇಕು ಎಂದು ತೀರ್ಪು ನೀಡಿ ಆದೇಶಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/10/2022 06:21 pm