ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ; ಕೇಶ್ವಾಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ

ಕ್ಷುಲ್ಲಕ ಕಾರಣಕ್ಕೆ ತಂಟೆ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ ಘಟನೆ ನಗರದ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರೋಹಿತ್ ಕುಮಾರ ಎಂಬಾತನೇ ಹಲ್ಲೆಗೆ ಒಳಗಾದ ಯುವಕ. ಎಂದಿನಂತೆ ಸ್ಟ್ರೀಟ್ ಫಾಸ್ಟ್ ಫುಡ್‌ನಲ್ಲಿ ಕೆಲಸ ಮಾಡುತ್ತಿರುವ ವೇಳೆಯಲ್ಲಿ, ಅಪರಿಚಿತ ಯುವಕರ ಗುಂಪೊಂದು ಅಂಗಡಿಗೆ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸಿ ತಂಟೆ ತೆಗೆದು ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಾಯಗೊಂಡ ರೋಹಿತ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಘಟನೆ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Edited By :
Kshetra Samachara

Kshetra Samachara

02/08/2022 01:21 pm

Cinque Terre

31.46 K

Cinque Terre

0

ಸಂಬಂಧಿತ ಸುದ್ದಿ