ನಿನ್ನೆ ರಾತ್ರಿ ಧಾರವಾಡದ ನುಗ್ಗಿಕೇರಿಯಲ್ಲಿ ನಡೆದ ಚಾಕು ಇರಿತ ಪ್ರಕರಣ ಇದೀಗ ಹೊಸತಿರುವು ಪಡೆದುಕೊಂಡಿದೆ.
ಹೌದು! ನಿನ್ನೆ ರಾತ್ರಿ ನುಗ್ಗಿಕೇರಿ ಬಳಿ ಹಾವೇರಿ ಮೂಲದ ನವೀನ್ ದೊಡಮನಿ ಎಂಬಾತನ ಕತ್ತು ಸೀಳಿ ಆರೋಪಿಗಳು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ, ಇದು ಹತ್ಯೆಗೆ ಯತ್ನಿಸಿದ್ದಲ್ಲ ಸ್ವತಃ ನವೀನ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.
ನವೀನ್ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಅಲ್ಲದೇ ಸ್ವತಃ ಚಾಕುವಿನಿಂದ ಕುತ್ತಿಗೆ ಹಾಗೂ ಹೊಟ್ಟೆಗೆ ಇರಿದುಕೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ಹಳೇ ವೈಷಮ್ಯ ಮತ್ತು ಯಾರೂ ಕೊಲೆಗೆ ಯತ್ನಿಸಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಾಲಸರ್ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/07/2022 08:10 pm