ಮನೆಯಲ್ಲಿನ ಆಂತರಿಕ ಕಲಹದಿಂದ ಬೇಸತ್ತು ಪತಿ-ಪತ್ನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಿನ್ನೆ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಕಲಘಟಗಿ ತಾಲ್ಲೂಕಿನ ಗಂಬ್ಯಾಪುರ ಗ್ರಾಮದ ದಂಪತಿ ರತ್ನಾ ಹಾಗೂ ಮೈಲಾರಪ್ಪ ಎಂಬುವರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪರಿಣಾಮ ಅಶ್ವಸ್ಥರಾದ ಅವರನ್ನು ಕೂಡಲೇ ಕಲಘಟಗಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕಲಘಟಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆ ಕಾರಣ ಏನು ಎಂಬ ಮಾಹಿತಿ ಕಲೆಹಾಕುತ್ತಿದ್ದಾರೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
10/09/2022 05:52 pm