ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮುಸ್ಲಿಂ ಅಂಗಡಿಗಳ ಮೇಲೆ ಹಿಂದೂ ಕಾರ್ಯಕರ್ತರ ದಾಳಿ- ನುಗ್ಗಿಕೇರಿಯಲ್ಲಿ ಗಲಾಟೆ

ಧಾರವಾಡ: ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತರು ಇಂದು ಏಕಾಏಕಿ ಕೆಲ ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

ನುಗ್ಗಿಕೇರಿಯಲ್ಲಿ ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಬಿಸಾಬ್ ಎಂಬುವರಿಗೆ ಸೇರಿದ ಅಂಗಡಿ ಮೇಲೆ ದಾಳಿ ಮಾಡಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅವರ ಅಂಗಡಿಯಲ್ಲಿದ್ದ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದರು.

ಇತ್ತೀಚೆಗಷ್ಟೆ ಹಿಂದೂ ದೇವಾಲಯಗಳ ಆವರಣದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು ಅಭಿಯಾನ ಪ್ರಾರಂಭವಾಗಿತ್ತು. ಕಳೆದ ಕೆಲ ದಿನಗಳ ಹಿಂದಷ್ಟೇ ಶ್ರೀರಾಮ ಸೇನೆ ಕಾರ್ಯಕರ್ತರು ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು ದೇವಸ್ಥಾನದ ಟ್ರಸ್ಟ್ ಕಮಿಟಿಯವರಿಗೆ ಮನವಿ ಸಲ್ಲಿಸಿದ್ದರು.

ಇಂದು ಏಕಾಏಕಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಿಕೇರಿಗೆ ಬಂದು ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

ಇನ್ನು ಹೊರಗಡೆ ಗಲಾಟೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಈ ಬಗ್ಗೆ ದೇವಸ್ಥಾನದ ಟ್ರಸ್ಟ್ ಕಮಿಟಿಯವರು ಸೇರಿಕೊಂಡು ಸಭೆ ನಡೆಸಿ ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ನರಸಿಂಹಸ್ವಾಮಿ ದೇಸಾಯಿ ಹೇಳಿದರು.

ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿದ್ದರಿಂದ ಮುಸ್ಲಿಂ ವ್ಯಾಪಾರಸ್ಥ ನಬೀಸಾಬ್ ಸಾಕಷ್ಟು ನಷ್ಟ ಅನುಭವಿಸುವಂತಾಗಿದ್ದು, ತನ್ನ ನಷ್ಟ ಭರಿಸಿಕೊಡುವಂತೆ ನಬೀಸಾಬ್ ಕಣ್ಣೀರು ಕೂಡ ಹಾಕಿದ್ದಾರೆ. ಬರುವ ದಿನಗಳಲ್ಲಿ ಈ ಒಂದು ಘಟನೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆಯೋ ಕಾದು ನೋಡಬೇಕಿದೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

09/04/2022 06:25 pm

Cinque Terre

125.42 K

Cinque Terre

180

ಸಂಬಂಧಿತ ಸುದ್ದಿ