ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಒಂದಿಲ್ಲೊಂದು ರೀತಿಯಲ್ಲಿ ಕೋಮು ಗಲಭೆ ಸೃಷ್ಟಿಸುವ ವಾತಾವರಣ ನಿರ್ಮಾಣ ಮಾಡುತ್ತಿದೆ. ಮುಸ್ಲಿಂ ಧಾರ್ಮಿಕತೆಗೆ ಧಕ್ಕೆ ಉಂಟಾಗುವ ವಿಡಿಯೋ ಪೋಸ್ಟ್ ಆದ ಬೆನ್ನಲ್ಲೇ ಕಿಡಗೇಡಿಗಳು ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವರ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಹೌದು. ನಿನ್ನೆ ತಡರಾತ್ರಿ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ಎದುರಿನಲ್ಲಿ ನಡೆದ ಕಲ್ಲು ತೂರಾಟದ ಬಿಸಿ ದಿಡ್ಡಿ ಹನುಮಂತ ದೇವರ ದೇವಸ್ಥಾನಕ್ಕೂ ತಟ್ಟಿದ್ದು, ಮತ್ತಷ್ಟು ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಹನುಮಂತ ದೇವರ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಗೇಡಿಗಳು ದೇವಸ್ಥಾನದ ಕಿಟಕಿ ಗಾಜು ಒಡೆದು ಧ್ವಂಸಗೊಳಿಸಿದ್ದಾರೆ. ಈಗಾಗಲೇ ಸಾಕಷ್ಟು ಬಿಗಿ ಭದ್ರತೆ ನಿಯೋಜನೆ ಮಾಡಿದ್ದು, ಪೊಲೀಸ್ ಇಲಾಖೆ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎನ್ನುವುದು ಪಬ್ಲಿಕ್ ಆಗ್ರಹ.
Kshetra Samachara
17/04/2022 12:04 pm