ಧಾರವಾಡ: ಕೆರೆಯಲ್ಲಿ ಮೀನು ಹಿಡಿಯಲೆಂದು ಹೋದ ವ್ಯಕ್ತಿಯೋರ್ವ ಅದೇ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಹೆಬ್ಬಳ್ಳಿ ಗ್ರಾಮದ ಬಸ್ಸು ಹಡಪದ ಎಂಬಾತನೇ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಸಾವನ್ನಪ್ಪಿದವನು.
ಮಾರಡಗಿ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬಸ್ಸು, ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ. ಕಳೆದ ಮೂರು ದಿನಗಳ ಹಿಂದೆಯೇ ಆತ ಕೆರೆಯಲ್ಲಿ ಬಿದ್ದಿದ್ದು, ಇಂದು ಆತನ ಶವ ಮೇಲೆ ಬಂದಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.
Kshetra Samachara
27/12/2020 05:56 pm