ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ವಿನಯ್, ಇಂಡಿ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿದೆ.

ಇದರಲ್ಲಿ ಚಂದ್ರಶೇಖರ ಇಂಡಿ ಅವರನ್ನು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಸಿಬಿಐ ಅಧಿಕಾರಿಗಳು ಹಾಜರುಪಡಿಸುವ ಸಾಧ್ಯತೆ ಇದೆ. ಇನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ್ ಅವರನ್ನು ಜೈಲಿನಿಂದಲೇ ವೀಡಿಯೋ ಕಾನ್ಫರನ್ಸ್ ಮೂಲಕ ನ್ಯಾಯಾಲಯದ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.

ಇನ್ನು ಧಾರವಾಡದ ಜಿಲ್ಲಾ ನ್ಯಾಯಾಲಯ ವಿನಯ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ವಿನಯ್ ಅವರು ಜಾಮೀನು ಕೋರಿ ಹೈಕೋರ್ಟ್ ಗೆ ಈಗಾಗಲೇ ಅರ್ಜಿ ಕೂಡ ಸಲ್ಲಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

28/12/2020 11:29 am

Cinque Terre

56.35 K

Cinque Terre

1

ಸಂಬಂಧಿತ ಸುದ್ದಿ