ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಬ್ರೇಕಿಂಗ್: ವಿನಯ್ ಗೆ ಹೊಸ ವರ್ಷಕ್ಕೂ ಸಿಗಲಿಲ್ಲ ರಿಲೀಫ್

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯೂ ಇಯರ್ ಗೂ ರಿಲೀಫ್ ಸಿಗದಂತಾಗಿದೆ.

ಇಂದು ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಬೆಳಗಾವಿ ಹಿಂಡಲಗಾ ಜೈಲಿನಿಂದಲೇ ವಿನಯ್ ಅವರನ್ನು ವೀಡಿಯೋ ಕಾನ್ಫರನ್ಸ್ ಮೂಲಕ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಿದರು.

ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜ.8ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿತು.

Edited By : Nagaraj Tulugeri
Kshetra Samachara

Kshetra Samachara

28/12/2020 12:43 pm

Cinque Terre

67.69 K

Cinque Terre

6

ಸಂಬಂಧಿತ ಸುದ್ದಿ