ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಅವರ ಹಂತಕರು ಜಾಮೀನು ಕೋರಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಹಣ ಪಡೆದು ಯೋಗೀಶಗೌಡರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಹರ್ಷಿತ್, ನೂತನ, ಶಾನವಾಜ್ ಸೇರಿದಂತೆ ಎಂಟು ಜನರನ್ನು ಸಿಬಿಐ ಪೊಲೀಸರು ಬಂಧಿಸಿ ಈಗಾಗಲೇ ಜೈಲಿಗಟ್ಟಿದ್ದು, ಇವರು ಜಾಮೀನು ಕೋರಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಪರಿಶೀಲಿಸಿದ ನ್ಯಾಯಾಲಯ ಈ ಕೊಲೆ ಪ್ರಕರಣದಲ್ಲಿ ನಿಮಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅವರ ಅರ್ಜಿಯನ್ನೇ ವಜಾಗೊಳಿಸಿದೆ.
Kshetra Samachara
29/12/2020 10:07 am