ಧಾರವಾಡ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕಮಲಾಪುರದಲ್ಲಿ ನಡೆದಿದೆ.
ಪ್ರವೀಣ ದುಬೆ (28) ಎಂಬ ಯುವಕನೇ ಆತ್ಮಹತ್ಯೆ ಮಾಡಿಕೊಂಡವನು. ನಿನ್ನೆ ರಾತ್ರಿ ಮನೆಯವರೊಂದಿಗೆ ಚೆನ್ನಾಗಿಯೇ ಇದ್ದ ಪ್ರವೀಣ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಈ ಸಂಬಂಧ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
31/12/2020 01:50 pm