ಧಾರವಾಡ: ಮೈಸೂರು ಜೈಲಿನಲ್ಲಿದ್ದುಕೊಂಡೇ ಧಾರವಾಡದ ಕೆಲ ಉದ್ಯಮಿಗಳಿಗೆ ಧಮ್ಕಿ ಹಾಕಿದ್ದಾನೆ ಎಂಬ ಆರೋಪದ ಮೇಲೆ ಧಾರವಾಡ ಉಪನಗರ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ಬಚ್ಛಾಖಾನ್ ನನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿಗೆ ಬಚ್ಛಾಖಾನ್ ನನ್ನು ತಮ್ಮ ಕಸ್ಟಡಿಗೆ ಪಡೆದಿದ್ದ ಪೊಲೀಸರು, ಇಂದು ಆ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಚ್ಛಾಖಾನ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಲಯ ಬಚ್ಛಾಖಾನ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ನಾಳೆ ಬೆಳಿಗ್ಗೆ ಬಚ್ಛಾಖಾನ್ ನನ್ನು ಮೈಸೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ.
Kshetra Samachara
31/12/2020 10:06 pm