ಹುಬ್ಬಳ್ಳಿ- ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಎರಡನೆಯ ಬಾರಿಗೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ವಿಷ ಸೇವಿಸಿದ ಯುವಕ ನಾಗರಾಜ ಎಂದು ತಿಳಿದು ಬಂದಿದ್ದು, ಈತ ಈ ಹಿಂದೆಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆಗಲೂ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದ.
ಆದ್ರೆ ನಿನ್ನೆ ಸಂಜೆ 6 ಗಂಟೆಯ ಸುಮಾರಿಗೆ ಮನೆಯಲ್ಲಿ ಬೆಳೆಗಳಿಗೆ ತಂದಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕೂಡಲೇ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ನಾಗರಾಜ ಮೂಲತಃ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದ ನಿವಾಸಿ ಈ ಸಂಬಂಧ ಗುತ್ತಲ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Kshetra Samachara
04/01/2021 09:47 am