ಹುಬ್ಬಳ್ಳಿ: ಮೂವರು ಮಕ್ಕಳಿರುವ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ, ಮಗು ಜನಿಸಿದಾಗ ಮದುವೆಗೆ ನಿರಾಕರಿಸಿದ ವ್ಯಕ್ತಿಯ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈರಿದೇವರಕೊಪ್ಪದ ಕಳ್ಳಿ ಓಣಿ ನಿವಾಸಿ ಸಿದ್ರಾಮ ಚಿಕ್ಕಮಠ ವಿರುದ್ಧ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. 2007ರಲ್ಲಿ ಆ ಮಹಿಳೆ ವರೂರಿನ ನಿವಾಸಿಯೊಬ್ಬರ ಜೊತೆ ಮದುವೆಯಾಗಿದ್ದರು.
ಐದು ವರ್ಷದ ಬಳಿಕ ಗಂಡನ ಆರೋಗ್ಯ ಕೆಟ್ಟಿದ್ದರಿಂದ ತವರು ಮನೆಗೆ ವಾಪಸ್ ಬಂದಿದ್ದಳು.
ಆ ವೇಳೆ ಸಿದ್ರಾಮ ಎಂಬಾತ ಮಕ್ಕಳಿಗೆ ಸಹಾಯ ಮಾಡುವ ನೆಪದಲ್ಲಿ ಸ್ನೇಹ ಬಯಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ.
2018ರ ಅಕ್ಟೋಬರ್ ನಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮದುವೆ ವಿಷಯ ಪ್ರಸ್ತಾಪಿಸಿದಾಗ ನಿರಾಕರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Kshetra Samachara
05/01/2021 11:22 am