ಹುಬ್ಬಳ್ಳಿ: ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿದ ಯುವಕನೋರ್ವ ಯುವತಿಯ ನಡತೆಯನ್ನು ಅನುಮಾನಿಸಿ ಆಕೆಯ ಆಶ್ಲೀಲ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಗರದ ಯುವತಿಗೆ ನಂಬಿಸಿದ ಕಲಬುರ್ಗಿಯ ಯುವಕನೊಬ್ಬ ವಾಟ್ಸ್‌ಆ್ಯಪ್ ವಿಡಿಯೊ ಕಾಲ್ ಮೂಲಕ ಅಶ್ಲೀಲ ವಿಡಿಯೊಗಳ ಸ್ಕ್ರೀನ್ ಶಾಟ್ ತೆಗೆದಿಟ್ಟುಕೊಂಡು, ಅವಳ ಹೆಸರಲ್ಲಿಯೇ ನಕಲಿ ಫೇಸ್‌ಬುಕ್ ಖಾತೆ ತೆರೆದು ಅವುಗಳನ್ನು ಪೋಸ್ಟ್ ಮಾಡಿದ್ದಾನೆ.
ಸಚಿನ್ ಶರಣಬಸಪ್ಪ ಕಾರ್ಣಿಕ ಎಂಬಾತನೇ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ನಗರದ ಮ್ಯಾದರ ಓಣಿಯ 24 ವರ್ಷದ ಯುವತಿಗೆ ಸಚಿನ್ ಆನ್‌ಲೈನ್‌ನಲ್ಲಿ ಪರಿಚಯವಾಗಿ, ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದ. ಆದ್ರೆ ಬರುಬರುತ್ತಾ 'ನೀನು ಬೇರೆಯವರನ್ನು ಪ್ರೀತಿಸುತ್ತಿದ್ದೀಯ, ನಿಶ್ಚಿತಾರ್ಥ ಮಾಡಿಕೊಂಡಿದ್ದೀಯ’ ಎಂದು ಸ್ಕ್ರೀನ್ ಶಾಟ್‌ಗಳನ್ನು ಯುವತಿಯ ವಾಟ್ಸ್‌ಆ್ಯಪ್‌ಗೆ ಕಳುಹಿಸಿ ಹೆದರಿಸಿದ್ದ. ನಂತರ, ಮಾನ ಹರಾಜು ಹಾಕುತ್ತೇನೆ ಎಂದು ಅವಳ ಹೆಸರಲ್ಲಿಯೇ ನಕಲಿ ಫೇಸ್‌ಬುಕ್ ಖಾತೆ ತೆರೆದು ಪೋಸ್ಟ್ ಮಾಡಿ ವೈರಲ್ ಮಾಡಿದ್ದಾನೆ’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದು, ಸೈಬರ್ ಠಾಣೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
Kshetra Samachara
05/01/2021 06:21 pm