ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮದುವೆಯನ್ನು ತಡೆಯುವಲ್ಲಿ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಬಸವೇಶ್ವರ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮದುವೆ ನಡೆಯುತ್ತಿತ್ತು. ಈ ಬಗ್ಗೆ ಸಾರ್ವಜನಿಕರೊಬ್ಬರು ತುರ್ತು ಸೇವೆಯ '112 ಎರಾಸ್' ಕರೆ ಮಾಡಿ ಮಾಹಿತಿ ನೀಡಿದ್ದಾರೆ.
112ಕ್ಕೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಅಧಿಕಾರಿಗಳು ಮದುವೆ ತಡೆದಿದ್ದಾರೆ. ಬಾಲ್ಯ ವಿವಾಹದ ದುಷ್ಪರಿಣಾಮದ ಬಗ್ಗೆ ಪಾಲಕರಿಗೆ ತಿಳಿ ಹೇಳಿ, ಕೆಲವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.
Kshetra Samachara
07/01/2021 07:13 pm