ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಂತೆ ಕಂತೆ ನೋಟುಗಳು ಕಂಡು ಎಸಿಬಿ ಅಧಿಕಾರಿಗಳು ಶಾಕ್‌...

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಎಇಇ ದೇವರಾಜ ಕೆ. ಶಿಗ್ಗಾವಿ ಅವರ ನಿವಾಸ ಮತ್ತು ತಾಯಿ ಹಾಗೂ ಮಾವನ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಏಕಕಾಲಕ್ಕೆ ದಾಳಿ ಮಾಡಿ, ಆದಾಯಕ್ಕಿಂತ ಹೆಚ್ಚಿನ ಸ್ಥಿರ-ಚಿರಾಸ್ತಿಯ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ದೇವರಾಜ ಅವರ ಇಲ್ಲಿನ ಅಕ್ಷಯ ಪಾರ್ಕ್ ಬಳಿಯ ರಾಜೀವ ನಗರ ನಿವಾಸ ಹಾಗೂ ಇವರ ತಾಯಿಯ ಗೋಕುಲ ರಸ್ತೆ ಕೋಟಿಲಿಂಗನಗರ ಹಾಗೂ ಇವರ ಮಾವನ ಬೆಂಗೇರಿ ಬಳಿಯ ಬಾಲಾಜಿ ನಗರದ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ, ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಇಇ ಮನೆಯಲ್ಲಿ ಪತ್ತೆಯಾದ ಅಪಾರ ಪ್ರಮಾಣ ದುಡ್ಡು, ಚಿನ್ನಾಭರಣ ಕಂಡು ಎಸಿಬಿ ಅಧಿಕಾರಿಗಳು ಶಾಕ್‌ ಆಗಿದ್ದಾರೆ.

ಇಇ ದೇವರಾಜ್ ಶಿಗ್ಗಾಂವಿ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಇವುಗಳ ಜೊತಗೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆಗಳು ಹಾಗೂ ಅಪಾರ ಪ್ರಮಾಣದ ಚೆಕ್ ಬುಕ್ ಕೂಡಾ ದೇವರಾಜ್ ಮನೆಯಲ್ಲಿ ಪತ್ತೆ‌ಯಾಗಿದ್ದು, ಇನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

02/02/2021 11:08 am

Cinque Terre

73 K

Cinque Terre

12

ಸಂಬಂಧಿತ ಸುದ್ದಿ