ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಎಇಇ ದೇವರಾಜ ಕೆ. ಶಿಗ್ಗಾವಿ ಅವರ ನಿವಾಸ ಮತ್ತು ತಾಯಿ ಹಾಗೂ ಮಾವನ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಏಕಕಾಲಕ್ಕೆ ದಾಳಿ ಮಾಡಿ, ಆದಾಯಕ್ಕಿಂತ ಹೆಚ್ಚಿನ ಸ್ಥಿರ-ಚಿರಾಸ್ತಿಯ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಲಾಕರ್ ಪರಿಶೀಲನೆಗೆ ದೇವರಾಜ ಶಿಗ್ಗಾವಿಯನ್ನು ಕರೆದೊಯ್ದದಿದ್ದಾರೆ.
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೇ ಮೂರು ಕಡೆಗಳಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು.ಶಿಗ್ಗಾವಿಯವರ ಮನೆಯಲ್ಲಿ ಕಂತೆ ಕಂತೆ ನೋಟು ಅಕ್ರಮ ಆಸ್ತಿಯನ್ನು ನೋಡಿ ಶಾಕ್ ಆದ ಬೆನ್ನಲ್ಲೇ ಮತ್ತೇ ಲಾಕರ್ ಪರಿಶೀಲನೆಗೆ ದೇವರಾಜ್ ಶಿಗ್ಗಾವಿಯನ್ನು ಕರೆದುಕೊಂಡು ಹೋಗಿದ್ದಾರೆ.
Kshetra Samachara
02/02/2021 12:03 pm