ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಏಳನೇ ಆರೋಪಿ ಸಂತೋಷ ಸವದತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಈ ಹಿಂದೆಯೂ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದ. ನಿನ್ನೆ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಸಂತೋಷನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಮೊದಲು ಪೊಲೀಸರಿಂದ ಬಂಧಿತರಾಗಿದ್ದ ಒಂದು ತಂಡದಲ್ಲಿ ಸಂತೋಷ 7ನೇ ಆರೋಪಿಯಾಗಿದ್ದ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
03/02/2021 01:00 pm