ಧಾರವಾಡ: ಸಾಲ ಮಾಡಿ ಮದುವೆಯಾಗಿದ್ದ ವ್ಯಕ್ತಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಹನುಮಂತರೆಡ್ಡಿ ಜಕರೆಡ್ಡಿ (35) ಎಂಬಾತನೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡವನು.
ಮದುವೆಗಾಗಿ 10 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಹನುಮಂತರೆಡ್ಡಿ ಅವರ ಸಂಸಾರದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇದರಿಂದ ಮನನೊಂದ ಈ ವ್ಯಕ್ತಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
04/02/2021 01:18 pm