ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಟೈರ್,ಟ್ಯೂಬ್ ಮತ್ತು ಪ್ಲ್ಯಾಪ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಹುಬ್ಬಳ್ಳಿ: ಗೋಕುಲ ರಸ್ತೆಯ ಇಂಡಸ್ಟ್ರೀಯಲ್ ಎಸ್ಟೇಟ್ ನಲ್ಲಿನ ಶ್ರೀ ಶಿವಶಕ್ತಿ ಎಂಟರ್ಪ್ರೈಸ್ ಗೋಡೌನದಲ್ಲಿ ಟೈಯರ್, ಟ್ಯೂಬ್ ಮತ್ತು ಪ್ಲ್ಯಾಪ್ ಗಳನ್ನ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಗೋಕುಲ್ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಗೋಕುಲ ರಸ್ತೆಯ ಮಾರುತಿನಗರದ ಹಳ್ಳೇಪ್ಪ ದೇವಪ್ಪ ಪೂಜಾರ ಮತ್ತು ಗದಗ-ಬೆಟಗೇರಿ ನರಸಾಪೂರದ ವಸೀಂ ಮಕ್ತುಮಸಾಬ್ ಸೈದಾಪೂರ ಎಂದು ಗುರುತಿಸಲಾಗಿದ್ದು, ಟ್ರಕ್ಕಿನ 11 ಟೈಯರ್, ಟ್ಯೂಬ್ ಹಾಗೂ ಪ್ಲ್ಯಾಪಗಳನ್ನ ವಶಕ್ಕೆ ಪಡೆಯಲಾಗಿದೆ. ಇವುಗಳ  ಮೌಲ್ಯ ಅಂದಾಜು 2.10.000 ರೂಪಾಯಿ ಎನ್ನಲಾಗಿದೆ.

ಗೋಡೌನದ ಸಿಮೆಂಟ್ ಸೀಟಿನ ನಟ್ ಬೋಲ್ಟ್ ಬಿಚ್ಚಿ ಗೋಡೌನದಲ್ಲಿ ಇಳಿದು ಕಳ್ಳತನ ಮಾಡಿರುವುದು ಬಂಧಿತರಿಂದ ಗೊತ್ತಾಗಿದೆ. ಆರೋಪಿತರಿಗೆ ಸಹಕಾರ ನೀಡಿರುವ ಇನ್ನುಳಿದ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದು, ಕಳ್ಳತನವಾಗಿರುವ ಇನ್ನುಳಿದ ಮಾಲನ್ನ ವಶಪಡಿಸಿಕೊಳ್ಳಲು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

05/02/2021 08:39 pm

Cinque Terre

52.11 K

Cinque Terre

1

ಸಂಬಂಧಿತ ಸುದ್ದಿ