ಹುಬ್ಬಳ್ಳಿ:ಸಾಲಭಾದೆಗೆ ಬೇಸತ್ತು ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕೊಳಿವಾಡ ಗ್ರಾಮದಲ್ಲಿ ನಡೆದಿದೆ.
ವೀರಸಂಗಪ್ಪ ಗುದ್ದಿನ ಮೃತ ದುರ್ದೈವಿ. ತನ್ನ ಜಮೀನಿನಲ್ಲಿಯೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವೀರಸಂಗಪ್ಪ ಗುದ್ದಿನ ಬ್ಯಾಂಕ್ ಆಫ್ ಬರೋಡಾದಲ್ಲಿ 1.52 ಲಕ್ಷ ಹಾಗೂ ಕೈಗಡವಾಗಿಯೂ ಸಾಲ ಮಾಡಿದ್ದ ಎನ್ನಲಾಗಿದೆ.
ಈ ಭಾರಿಯ ಮುಂಗಾರು,ಹಿಂಗಾರು ಬೆಳೆ ಕೈಕೊಟ್ಟ ಹಿನ್ನಲೆಯಲ್ಲಿ ಸಾಲಗಾರರ ಕಾಟ ತಾಳಲಾರದೆ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
07/02/2021 11:17 am