ಲಕ್ಷ್ಮೇಶ್ವರ: 17 ವರ್ಷದ ಹಿಂದೆ ಹೆಂಡತಿಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಲಕ್ಷ್ಮೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೀರೆಮಲ್ಲಾಪೂರದ ವೀರಯ್ಯ ಶಿವಯ್ಯ ಹಿರೇಮಠ ಬಂಧಿತ ಆರೋಪಿ. ವೀರಯ್ಯ ತನ್ನ ಈರಮ್ಮ ಅವರನ್ನು ಕೊಲೆ ಮಾಡಿ ಹಳ್ಳದಲ್ಲಿ ಎಸೆದು ಸಾಕ್ಷಿ ನಾಶಪಡಿಸಿ ತಲೆ ಮರೆಸಿಕೊಂಡಿದ್ದ.
ಪತ್ನಿ ಈರಮ್ಮ ಅವರ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ವೀರಯ್ಯ ಅಂಕಲಿಯ ದೊಡ್ಡಹಳ್ಳದಲ್ಲಿ ಕೊಲೆ ಮಾಡಿದ್ದ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನಟ್ಟಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kshetra Samachara
08/02/2021 08:51 pm