ನವಲಗುಂದ : ತಾಲೂಕಿನ ನಾಯಕನೂರು ಗ್ರಾಮದ ಕರಿಯಮ್ಮದೇವಿ ದೇವಸ್ಥಾನದಲ್ಲಿ ಕಳೆದ ಎರಡು ದಿನಗಳ ಹಿಂದೆ ಕಳ್ಳತನ ನಡೆದಿದ್ದು, ಮೂರು ನಾಲ್ಕು ಲಕ್ಷ ರೂಪಾಯಿಗಳ ಮೌಲ್ಯದ ಬಂಗಾರ ಬೆಳ್ಳಿಯ ಆಭರಣಗಳನ್ನು ಖದೀಮರು ಹೊತ್ತೋಯ್ದಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದ್ದು, ಬೆಳ್ಳಂ ಬೆಳಿಗ್ಗೆ ದೇವಸ್ಥಾನಕ್ಕೆ ಬಂದ ಮೂರು ನಾಲ್ಕು ಜನರು ದೇವಿಯ ಮೇಲಿದ್ದ ಬಂಗಾರ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ .
ಘಟನೆ ಹಿನ್ನಲೆ ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೆಟ್ಟಿಕೊಂಡಿದ್ದಾರೆ.
Kshetra Samachara
09/02/2021 06:35 pm