ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿರುವ ಸಾಕ್ಷ್ಯ ನಾಶ ಪ್ರಕರಣದ ವಿಚಾರಣೆಯನ್ನು ಧಾರವಾಡದ ಜೆಎಂಎಫ್‌ಸಿ ನ್ಯಾಯಾಲಯ ಮತ್ತೆ ನಾಳೆಗೆ ಮುಂದೂಡಿತು.
ಸಿಬಿಐ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗವಣೆಯಾದ ಹಿನ್ನೆಲೆ ಈ ಪ್ರಕರಣವನ್ನೂ ಸಹ ಅದೇ ಕೋರ್ಟ್‌ಗೆ ವರ್ಗಾಯಿಸುವಂತೆ ವಿನಯ್ ಕುಲಕರ್ಣಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನಿನ್ನೆಯೂ ಈ ಪ್ರಕರಣದ ವಿಚಾರಣೆ ನಡೆದಿತ್ತು. ಇಂದು ಕೂಡ ನ್ಯಾಯಾಲಯ ಇದರ ವಿಚಾರಣೆಯನ್ನು ನಾಳೆಗೆ ಮುಂದೂಡಿತು.
ಸಿಬಿಐನಿಂದ ಸಾಕ್ಷ್ಯ ನಾಶದ ಕುರಿತು ಪ್ರತ್ಯೇಕ ದೂರು ಸಲ್ಲಿಸಿತ್ತು. ಸಿಬಿಐ ದೂರು ಆಧರಿಸಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ವಿನಯ್ ಸೇರಿ 8 ಜನರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು. ವಿನಯ್ ಕುಲಕರ್ಣಿ ಪ್ರಕರಣದ ಮೊದಲ ಆರೋಪಿಯಾಗಿದ್ದು, ಯೋಗೀಶಗೌಡ ಕೊಲೆ ಬಳಿಕ ಸಾಕ್ಷ್ಯನಾಶ ಮಾಡುವ ಯತ್ನ ನಡೆದಿತ್ತು ಎನ್ನಲಾಗಿದೆ.
Kshetra Samachara
11/02/2021 06:02 pm