ಧಾರವಾಡ: ಧಾರವಾಡದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಮೃತ ದೇಸಾಯಿ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ತಮ್ಮ ಗೃಹ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಎಸಿಪಿ ಅನುಷಾ, ಉಪನಗರ ಠಾಣೆ ಇನ್ ಸ್ಪೆಕ್ಟರ್ ಪ್ರಮೋದ ಯಲಿಗಾರ, ಶಹರ ಠಾಣೆ ಇನ್ ಸ್ಪೆಕ್ಟರ್ ಸಂಗಮೇಶ ದಿಡ್ಡಿಗನಾಳ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾತ್ರಿ ವೇಳೆ ಬೀಟ್ ಗಾಗಿ ಹೆಚ್ಚು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಬೇಕು. ಈ ರೀತಿಯ ಕಳ್ಳತನವಾಗುತ್ತಿರುವುದರಿಂದ ತಪ್ಪು ಸಂದೇಶ ಹೋಗುತ್ತಿದೆ. ಕಳ್ಳರ ಹೆಡೆಮುರಿ ಕಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಮೃತ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಧಾರವಾಡದ ಸೂಕ್ಷ್ಮ ಹಾಗೂ ಕಳ್ಳತನವಾಗುವಂತಹ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕಳ್ಳರ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು. ದಿನೇ ದಿನೇ ಈ ರೀತಿ ಕಳ್ಳತನವಾಗುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಜನ ನಿರ್ಭೀತಿಯಿಂದ ಬದುಕುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Kshetra Samachara
13/02/2021 07:23 pm