ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾಗುವಷ್ಟರಲ್ಲಿ ಕೊಲೆ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡ: ಧಾರವಾಡದ ಡಿಪೊ ಸರ್ಕಲ್ ಬಳಿಯ ಮನೆಯೊಂದರಲ್ಲಿ ತನ್ನ ಅಣ್ಣನ ಮಗನನ್ನೇ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಬೆಳಗಾಗುವಷ್ಟರಲ್ಲಿ ಪೊಲೀಸರು ಹೆಡೆಮುರಿ ಕಟ್ಟಿ ತಂದಿದ್ದಾರೆ. ಆಕಾಶ ಕೋಟೂರ (30) ಎಂಬ ಯುವಕನನ್ನು ಆತನ ಚಿಕ್ಕಪ್ಪನಾದ ಪ್ರಕಾಶ ಕೋಟೂರ ನಿನ್ನೆ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ.

ಆಕಾಶ ದಿನನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಈ ಹತ್ಯೆ ನಡೆದಿದ್ದು, ಪೊಲೀಸ್ ತನಿಖೆಯಿಂದ ಇನ್ನಷ್ಟೇ ಹೆಚ್ಚಿನ ವಿಚಾರಗಳು ಗೊತ್ತಾಗಬೇಕಿದೆ. ನಿನ್ನೆ ರಾತ್ರಿಯಿಂದಲೇ ಕೊಲೆ ಆರೋಪಿಯ ಪತ್ತೆಗಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು. ಧಾರವಾಡದಲ್ಲೇ ಕೊಲೆ ಆರೋಪಿಯಾದ ಪ್ರಕಾಶನನ್ನು ಪೊಲೀಸರು ಬಂಧಿಸಿ ಕರೆ ತಂದಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

15/02/2021 11:41 am

Cinque Terre

79.17 K

Cinque Terre

5

ಸಂಬಂಧಿತ ಸುದ್ದಿ