ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಂಧರ್

ಹುಬ್ಬಳ್ಳಿ- ಮಹಿಳೆಯನ್ನು ಗೋವಾಗೆ ಕರೆದುಕೊಂಡು ಹೋಗಿ, ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಲಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹಜರೇಸಾಬ ಖಾಸೀಮಸಾಬ ಓಲೇಕಾರ ಎಂಬ ಬಂಧಿತವಾದ ವ್ಯಕ್ತಿ. ಪಾಲಿಕೊಪ್ಪ ಗ್ರಾಮದ ಮಹಿಳೆಗೆ ಧಮಕಿ ಹಾಕಿ ಗೋವಾಗೆ ಕರೆದುಕೊಂಡು ಹೋಗಿದ್ದ ಆರೋಪಿ, ಗೋಡೌನವೊಂದರಲ್ಲಿ ಅತ್ಯಾಚಾರ ಮಾಡಿದ್ದಾನೆಂಬ ದೂರಿನ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯನ್ನು ಬಂಧನ ಮಾಡಿರುವಲ್ಲಿ ಯಶಸ್ವಿಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎರಡು ಮಕ್ಕಳ ತಾಯಿಯಾಗಿರುವ ಮಹಿಳೆಯನ್ನು, ಟೇಲರಿಂಗ್ ಕೆಲಸ ಮಾಡುತ್ತಿದ್ದ ಹಜರೇಸಾಬ ಗೋವಾಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದ ಆರೋಪಿಯನ್ನು, ಇದೀಗ ಬಂಧನ ಮಾಡಿ ಪೊಲೀಸರು, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

19/02/2021 09:34 am

Cinque Terre

58.86 K

Cinque Terre

4

ಸಂಬಂಧಿತ ಸುದ್ದಿ