ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಬಹಿರ್ದೆಸೆಗೆಂದು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

ಕುಂದಗೋಳ: ಬಹಿರ್ದೆಸೆಗೆಂದು ಹೊರಗಡೆ ಹೋದ ಬಾಲಕನೋರ್ವ ಕುಡಿಯುವ ನೀರಿನ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಅಲ್ಲಾಪೂರ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಅಲ್ಲಾಪೂರ ಗ್ರಾಮದ ಸಾಗರ ಬಸವರಾಜ ಪೂಜಾರ (7) ಮೃತ ಬಾಲಕ. ಕೆರೆಯಲ್ಲಿ ಬಾಲಕನ ಶವ ತೇಲುತ್ತಿರುವುದನ್ನು ನೋಡಿದ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಶವವನ್ನು ಕೆರೆಯಿಂದ ಹೊರಗೆ ತೆಗೆದಿದ್ದಾರೆ. ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣದ ಮಾಹಿತಿ ನೀಡಿದ್ದಾರೆ.

Edited By : Vijay Kumar
Kshetra Samachara

Kshetra Samachara

20/02/2021 10:21 pm

Cinque Terre

82.82 K

Cinque Terre

0

ಸಂಬಂಧಿತ ಸುದ್ದಿ