ಧಾರವಾಡ: ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಮಾಳಮಡ್ಡಿಯಲ್ಲಿ ನಡೆದಿದೆ.
ಸುಮಾ ಜೋಶಿ (35) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಶಂಕಿಸಲಾಗಿದೆ.
ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಜೊತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಭೇಟಿ ನೀಡಿ ಶವವನ್ನು ಬಾವಿಯಿಂದ ಹೊರ ತೆಗೆಯುವ ಕೆಲಸ ಮಾಡಿದ್ದಾರೆ.
Kshetra Samachara
21/02/2021 09:52 pm