ಹುಬ್ಬಳ್ಳಿ: ಸಾರಿಗೆ ಬಸ್ ಹಾಗೂ ನಿಂತ ಕಾರಿನಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ನರಸೇರಾಮಪೇಟಾ ತಾಲೂಕಿನ ಸಂತಮಾಗಳೂರು ಗ್ರಾಮದ ಶ್ಯಾಮ್ ವೆಂಕಟೇಶ್ವರಲು (23) ಬಂಧಿತ ಆರೋಪಿ. ಆತನಿಂದ 1.80 ಲಕ್ಷ ರೂ. ಮೌಲ್ಯದ 40 ಗ್ರಾಂ ಚಿನ್ನದ ಮಾಂಗಲ್ಯ ಸರ, 15 ಸಾವಿರ ರೂ. ಮೌಲ್ಯದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಕೆ ಮಾಡುತ್ತಿದ್ದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ.
ಡಿಸಿಪಿಗಳಾದ ಕೆ.ರಾಮರಾಜನ್ ಹಾಗೂ ಆರ್.ಬಿ.ಬಸರಗಿ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ರವಿಚಂದ್ರ ಬಡಪಕ್ಕೀರಪ್ಪನವರ, ಪಿಎಸ್ಐ ಸೀತಾರಾಮ್ ಲಮಾಣಿ, ಸಿಬ್ಬಂದಿ ಕೆ.ಎನ್.ನೆಲಗುಡ್ಡ, ಸುನೀಲ ಪಾಂಡೆ, ಮಲ್ಲಿಕಾರ್ಜುನ ಧನಿಗೊಂಡ, ಮಂಜುನಾಥ ಯಕ್ಕಡಿ, ಉಮೇಶ ಹೆದ್ದೇರಿ, ರವಿ ಹೊಸಮನಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
Kshetra Samachara
22/02/2021 10:39 pm