ಹುಬ್ಬಳ್ಳಿ: ಬಟ್ಟೆ ಅಂಗಡಿ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಉಪನಗರ ಖಾಕಿ ಪಡೆ ಯಶಸ್ವಿಯಾಗಿದೆ.
ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿರುವ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಹಿರಿಯ ಅಧಿಕಾರಿಗಳು ಇನ್ಸ್ ಪೆಕ್ಟರ್ ರವಿಚಂದ್ರ ಡಿ. ಬಡಪಕ್ಕೀರಪ್ಪನವರ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿ ರವರ ನೇತೃತ್ವದ ತಂಡವನ್ನು ರಚನೆ ಮಾಡಲಾಗಿತ್ತು.ದಿ.25ರಂದು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಹದ್ದಿನಲ್ಲಿ ಬಟ್ಟೆಯ ಅಂಗಡಿಗೆ ಹಾಕಿದ ಸೆಟ್ರಸ್ ಕೀಲಿಯನ್ನು ಮುರಿದು ಕಳ್ಳತನ ಮಾಡಿದ ಪ್ರಕರಣ ಪತ್ತೆ ಮಾಡಿ ಆರೋಪಿಯನ್ನು ಬಂಧನ ಮಾಡಲಾಗಿದೆ.
ಪೈರೋಜ್ ಜಪ್ರಿ ರಾಜೇಸಾಬ ಎಂಬವನನ್ನು ಬಂಧಿಸಿದ ಪೊಲೀಸರು 4,150 ರೂಪಾಯಿ ನಗದು ವಶಪಡಿಸಿಕೊಂಡಿದ್ದು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Kshetra Samachara
25/02/2021 10:47 pm