ಕುಂದಗೋಳ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಹೆಂಡತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಸಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ನಿನ್ನೆ ರಾತ್ರಿಯಿಂದಲೇ ಮನೆಯಲ್ಲೇ ದಂಪತಿಗಳಿಬ್ಬರ ನಡುವೆ ಆರಂಭವಾಗಿದ್ದ ಜಗಳ ಇಂದು ಬೆಳಿಗ್ಗೆ ಅತಿರೇಕಕ್ಕೆ ಎರಗಿದ್ದು ಪತಿ ಕಮಲಸಾಬ ಹುಸೇನಸಾಬ ದರಗದ ಎಂಬಾತನೇ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆತನ್ನು ಕುಂದಗೋಳ ತಾಲೂಕು ಆಸ್ಪತ್ರೆಗೆ ರವಾನಿಸಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಚಾಕು ಇರಿದ ಪತಿ ಕಮಲಸಾಬ ಹುಸೇನಸಾಬ ದರಗದ ನಾಪತ್ತೆಯಾಗಿದ್ದು ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.
Kshetra Samachara
26/02/2021 12:01 pm