ಧಾರವಾಡ: ಯೋಗೀಶಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ನಿನ್ನೆಯಷ್ಟೇ ತಮ್ಮ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಪಿಎ ನೀಡಲು ಧಾರವಾಡಕ್ಕೆ ಬಂದು ಹೋದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಯೋಗೀಶಗೌಡರ ಹತ್ಯೆ ತನಿಖೆಯನ್ನು ಮತ್ತೆ ಕೈಗೆತ್ತಿಕೊಂಡಿದ್ದಾರೆ.
ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಬಂದಿರುವ ಸಿಬಿಐ ಅಧಿಕಾರಿಗಳು ಯೋಗೀಶಗೌಡ ಪತ್ನಿ ಮಲ್ಲಮ್ಮ, ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ, ಶಿವಾನಂದ ಕರಿಗಾರ ಅವರನ್ನು ಮತ್ತೆ ಕರೆಯಿಸಿ ವಿಚಾರಣೆ ನಡೆಸಿದ್ದಾರೆ.
ಮುತ್ತಗಿ ವಿಚಾರಣೆ ಮುಗಿಸಿ ಹೊರ ಬಂದಿದ್ದು, ವಿನಯ್ ಬಂದು ಹೋದ ಬೆನ್ನಲ್ಲೇ ಸಿಬಿಐ ಮತ್ತೆ ತನಿಖೆ ಚುರುಕುಗೊಳಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
Kshetra Samachara
28/07/2021 09:11 pm