ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವ್ಯಕ್ತಿ ಅಡ್ಡಗಟ್ಟಿ ಚಿನ್ನದ ಸರ ದೋಚಿದ ಖದೀಮರು

ಧಾರವಾಡ: ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಅವರ ಬಳಿ ಇದ್ದ ಸುಮಾರು 25 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ನಡೆದಿದೆ.

ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಫಕ್ಕೀರಗೌಡ ಕಲ್ಲನಗೌಡರ ಎಂಬುವವರು ಹಾರೋಬೆಳವಡಿ ಗ್ರಾಮದ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ಇಬ್ಬರು ಅವರನ್ನು ಅಡ್ಡಗಟ್ಟಿ ಬೆದರಿಸಿ ಅವರ ಬಳಿ ಇದ್ದ ಚಿನ್ನದ ಸರ ದೋಚಿಕೊಂಡು ಹೋಗಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

06/08/2021 09:25 pm

Cinque Terre

59.35 K

Cinque Terre

1

ಸಂಬಂಧಿತ ಸುದ್ದಿ